Bengaluru Accident: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ

Updated on: Apr 29, 2025 | 7:11 AM

ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿ 4 ಕಾರುಗಳು ಜಖಂಗೊಂಡಿವೆ. ಕೆಲವು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಏರ್​​ಪೋರ್ಟ್ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸುಮಾರು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆಯ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಏಪ್ರಿಲ್ 29: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರುಗಳು ಜಖಂಗೊಂಡಿರುವ ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More