ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್

Updated on: May 19, 2025 | 2:39 PM

ನೆಲಮಂಗಲ ತಾಲೂಕಿನ ಕೆಂಗಲ್ ಕೆಪ್ಪೋಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೂರು ಕಾರುಗಳು ಮತ್ತು ಒಂದು ಲಾರಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಕಾರುಗಳಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಅರ್ಧ ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ನೆಲಮಂಗಲ, ಮೇ 19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 3 ಕಾರುಗಳು ಮತ್ತು ಒಂದು ಲಾರಿ ನಡುವೆ ಸರಣಿ ಅಪಘಾತ (Serial Accident) ಸಂಭವಿಸಿರುವಂತಹ ಘಟನೆ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಅರ್ಧ ಕಿಲೋ ಮೀಟರ್​ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಡಿಯೋ ನೋಡಿ.

ವರದಿ: ಮಂಜುನಾಥ್​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More