ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್ ಬಾಸ್ ಸ್ಪರ್ಧಿಗಳು: ಗಳಗಳನೆ ಕಣ್ಣೀರು ಹಾಕಿದ ಸಿರಿ
ಟಾಸ್ಕ್ ವೇಳೆ ಕೆಲವರು ಮೈ ಮೇಲೆ ಬಿದ್ದಿದ್ದಾರೆ. ಇದರಿಂದ ಮಹಿಳಾ ಸ್ಪರ್ಧಿಗಳಿಗೆ ತೊಂದರೆ ಆಗಿದೆ. ಸಿರಿ ಅವರು ಕಣ್ಣೀರು ಹಾಕಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ನವೆಂಬರ್ 29ರ ರಾತ್ರಿ 9.30ಕ್ಕೆ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಈ ಸಂಚಿಕೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಲೈವ್ ನೋಡಲು ಅವಕಾಶ ಇದೆ.
ಸೀರಿಯಲ್ ನಟಿ ಸಿರಿ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ನೀಡಿದ ಟಾಸ್ಕ್ ಮಾಡುವಾಗ ಕೆಲವರು ಅಗ್ರೆಸಿವ್ ಆಗಿ ನಡೆದುಕೊಂಡಿದ್ದಾರೆ. ಆಟ ಗೆಲ್ಲಲೇಬೇಕು ಎಂಬ ಜಿದ್ದಿನಿಂದ ಒಬ್ಬರ ಮೇಲೆ ಮತ್ತೊಬ್ಬರು ಬಿದ್ದಿದ್ದಾರೆ. ಇದರಿಂದ ಕೆಲವು ಸ್ಪರ್ಧಿಗಳಿಗೆ ನೋವಾಗಿದೆ. ಸ್ನೇಹಿತ್ (Snehith Gowda), ಮೈಕೆಲ್ ಮುಂತಾದವರು ಬಲ ಪ್ರಯೋಗಿಸಿ ಬೇರೆಯವರನ್ನು ತಳ್ಳಿದ್ದಾರೆ. ‘ಇಷ್ಟೊಂದು ಫಿಸಿಕಲ್ ಬೇಕಾ ಸ್ನೇಹಿತ್’ ಎಂದು ಮನೆ ಮಂದಿ ಪ್ರಶ್ನೆ ಮಾಡಿದ್ದಾರೆ. ‘ಏನಿದು ರಾಕ್ಷಸರ ರೀತಿ..’ ಎಂದು ಮಹಿಳಾ ಸ್ಪರ್ಧಿಗಳು ಟೀಕಿಸಿದ್ದಾರೆ. ಈ ಟಾಸ್ಕ್ನಲ್ಲಿ ಕೆಲವರು ನಡೆದುಕೊಂಡ ರೀತಿಯಿಂದ ಸಿರಿಗೆ (Siri) ಕಷ್ಟ ಆಗಿದೆ. ಅವರು ನೋವಿನಿಂದ ಕಣ್ಣೀರು ಹಾಕಿದ್ದಾರೆ. ಇದರ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
