ನೈಟ್ ಕರ್ಫ್ಯೂ ಇದ್ರೂ ನಡೀತಿತ್ತು ಸೀರಿಯಲ್ ಶೂಟಿಂಗ್; ಸ್ಥಳಕ್ಕೆ ಬಂದ ಪೊಲೀಸರು ಮಾಡಿದ್ದೇನು?
ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡ ಕೆಲವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಘಟನೆ ನಡೆದಿದೆ.
ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚಾಗುತ್ತಿದೆ. ಕೊರೊನಾ (Coronavirus) ನಿಯಂತ್ರಣಕ್ಕಾಗಿ ಸರ್ಕಾರಗಳು ಹಲವು ನಿಯಮಗಳನ್ನು ಜಾರಿ ಮಾಡಿವೆ. ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಇದರಿಂದಾಗಿ ಅನೇಕ ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ರೈತರಿಂದ ಹಿಡಿದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಸುವ ಉದ್ಯಮಿಗಳು ಕೂಡ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಚಿಕ್ಕಮಗಳೂರಿನ (Chikmagalur News) ಒಂದು ಹೋಟೆಲ್ನಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿ ಧಾರಾವಾಹಿ ಶೂಟಿಂಗ್ ಮಾಡಲಾಗುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಿತ್ರೀಕರಣ ಬಂದ್ ಮಾಡಿಸಿದ್ದಾರೆ. ಎಲ್ಲರಿಗೂ ಎಚ್ಚರಿಕೆ ನೀಡಿ ಮನೆಗೆ ಕಳಿಸಿದ್ದಾರೆ.
ಇದನ್ನೂ ಓದಿ:
ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮಾಲೀಕರ ಸಂಘದಿಂದ ಭಾರಿ ವಿರೋಧ
ನೈಟ್ ಕರ್ಫ್ಯೂ : ಅಸಮಧಾನ ವ್ಯಕ್ತಪಡಿಸಿದ ಪಬ್ ಮಾಲೀಕರು: ಈ ಕುರಿತು ಮರುಪರಿಶೀಲನೆ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ