ಬೆಳಗಾವಿ; ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ: ಸಿದ್ದರಾಮಪ್ಪ, ಪೊಲೀಸ್ ಆಯಕ್ತ
ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಬೆಳಗಾವಿ: ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ (strippe ) ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ (assault) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ ಮತ್ತು ಹಲ್ಲೆ ನಡೆಸಿ ನಾಪತ್ತೆಯಾಗಿರುವ ಇನ್ನಿಬ್ಬರಿಗಾಗಿ ಶೋಧ ಜಾರಿಯಲ್ಲಿದೆ ಎಂದು ಬೆಳಗಾವಿ ಪೊಲೀಸ್ ಕಮೀಶನರ್ ಎಸ್ ಎನ್ ಸಿದ್ದರಾಮಪ್ಪ (Siddaramappa, police commissioner) ಹೇಳಿದರು. ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ವಿವರಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಪ್ಪ, ಹಲ್ಲೆಗೊಳಗಾದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ, ಅವರ ಜೀವಕ್ಕೇನೂ ಅಪಾಯವಿಲ್ಲ ಎಂದು ಹೇಳಿದರು. ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ