ಬೆಳಗಾವಿ; ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ: ಸಿದ್ದರಾಮಪ್ಪ, ಪೊಲೀಸ್ ಆಯಕ್ತ

Updated on: Dec 11, 2023 | 1:39 PM

ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ (strippe ) ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ (assault) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ ಮತ್ತು ಹಲ್ಲೆ ನಡೆಸಿ ನಾಪತ್ತೆಯಾಗಿರುವ ಇನ್ನಿಬ್ಬರಿಗಾಗಿ ಶೋಧ ಜಾರಿಯಲ್ಲಿದೆ ಎಂದು ಬೆಳಗಾವಿ ಪೊಲೀಸ್ ಕಮೀಶನರ್ ಎಸ್ ಎನ್  ಸಿದ್ದರಾಮಪ್ಪ (Siddaramappa, police commissioner) ಹೇಳಿದರು. ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ವಿವರಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಪ್ಪ, ಹಲ್ಲೆಗೊಳಗಾದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ, ಅವರ ಜೀವಕ್ಕೇನೂ ಅಪಾಯವಿಲ್ಲ ಎಂದು ಹೇಳಿದರು. ಹಲ್ಲೆಗೊಳಗಾದ ಕುಟುಂಬ ಸದಸ್ಯರು ನೀಡಿರುವ ದೂರಿನ ಮೇರೆಗೆ, ಅನ್ವಯವಾಗುವ ಸೆಕ್ಷನ್ ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಗ್ರಾಮದಲ್ಲಿ ಮತ್ತೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕುಡಿ, ಒಬ್ಬ ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 11, 2023 12:40 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More