AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ

ಸಹದೇವ್​ ಮಾನೆ
| Edited By: |

Updated on: Jul 06, 2026 | 3:41 PM

Share

ಮುಖ್ಯಾಂಶಗಳು

  • ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆರಾಯನ ಅಬ್ಬರ
  • ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧ
  • ಟಿವಿ9ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಹೇಳಿಕೆ

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ, (ಜುಲೈ 06): ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ ಸಮಸ್ಯೆ ದೂರ ಆಗಿದೆ. ಈವರೆಗೆ ಜಿಲ್ಲೆಯಲ್ಲಿ ಮಳೆಗೆ 5 ಮನೆಗಳಿಗೆ ಹಾನಿಯಾಗಿದೆ. ಸದ್ಯಕ್ಕೆ ಜಲಪಾತಗಳು ಸೇಫ್ ಇಲ್ಲ, ಹೀಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More