Karnataka News: ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ, ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿದ ಹಲವಾರು ಜಿಲ್ಲಾಡಳಿತಗಳು

Karnataka News: ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ, ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿದ ಹಲವಾರು ಜಿಲ್ಲಾಡಳಿತಗಳು

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 27, 2023 | 11:01 AM

ಮಳೆ ಯಾವಾಗ ನಿಲ್ಲುತ್ತದೆ ಅಂತ ಹವಾಮಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ

ಬೆಂಗಳೂರು: ರಾಜ್ಯದಲ್ಲಿ ತಡವಾಗಿ ಸುರಿಯಲಾರಂಭಿಸಿದ ಮಳೆ ನಿಲ್ಲುವ ಸೂಚನೆಯನ್ನು ನೀಡುತ್ತಿಲ್ಲ. ಕರಾವಳಿ ಪ್ರದೇಶದಿಂದ (coastal region) ಶುರುವಾದ ಮಳೆ ಕ್ರಮೇಣ ರಾಜ್ಯದೆಲ್ಲಡೆ ಸುರಿಯಲಾರಂಭಿಸಿತು. ಕಿತ್ತೂರು ಕರ್ನಾಟಕ (Kittur Karnataka), ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಜಿಲ್ಲೆಗಳೆಲೆಲ್ಲ ಒಂದು ವಾರಕ್ಕಿಂತ ಹೆಚ್ಚಿನ ಸಮಯದಿಂದ ಒಂದೇ ಸಮ ಮಳೆ ಸುರಿಯುತ್ತಿದ್ದು ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮುಂಜಾಗ್ರತೆ ಕ್ರಮವಾಗಿ ಅನೇಕ ಜಿಲ್ಲಾಡಳಿತಗಳು ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾಡಳಿತಗಳು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಮಳೆ ಯಾವಾಗ ನಿಲ್ಲುತ್ತದೆ ಅಂತ ಹವಾಮಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ