ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ,ಜಾತಿಗಣತಿ ಮುಂದೂಡಿಕೆ ಆಗುತ್ತಾ?
ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರಿಸಿದರೆ ತೊಂದರೆ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, (ಸಪ್ಟೆಂಬರ್ 18): ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರಿಸಿದರೆ ತೊಂದರೆ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಸಮೀಕ್ಷೆ ಮುಂದುವರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್, ಸಂತೋಷ್ ಲಾಡ್ ಹಾಗೂ ಕೆ.ಹೆಚ್.ಮುನಿಯಪ್ಪ ಮಾತ್ರ ಒಲವು ವ್ಯಕ್ತಪಡಿಸಿದ್ದಾರೆ. ಇನ್ನುಳಿದಂತೆ ಎಲ್ಲಾ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಜಾತಿಗಣತಿ ಸಮೀಕ್ಷೆ ಮುಂದೂಡಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

