ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ,ಜಾತಿಗಣತಿ ಮುಂದೂಡಿಕೆ ಆಗುತ್ತಾ?

Updated on: Sep 18, 2025 | 5:48 PM

ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರಿಸಿದರೆ ತೊಂದರೆ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, (ಸಪ್ಟೆಂಬರ್ 18): ಸಿದ್ದರಾಮಯ್ಯ (Siddaramaiah) ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ (Caste Census) ಸಚಿವರ ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಇಂದು(ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಏರು ಧ್ವನಿಯಲ್ಲಿ ಕೆಲ ಸಚಿವರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರಿಸಿದರೆ ತೊಂದರೆ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಸಮೀಕ್ಷೆ ಮುಂದುವರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್​, ಸಂತೋಷ್​ ಲಾಡ್ ಹಾಗೂ ಕೆ.ಹೆಚ್​.ಮುನಿಯಪ್ಪ ಮಾತ್ರ ಒಲವು ವ್ಯಕ್ತಪಡಿಸಿದ್ದಾರೆ. ಇನ್ನುಳಿದಂತೆ ಎಲ್ಲಾ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಜಾತಿಗಣತಿ ಸಮೀಕ್ಷೆ ಮುಂದೂಡಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More