ಕನ್ನಡ ಶಾಲೆ ಉಳಿಸಲು ಆಗ್ರಹ: ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್ಎಫ್‌ಐ ಮುಖಂಡರು ವಶಕ್ಕೆ
ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಗೂ ಮುನ್ನ ಎಸ್ಎಫ್‌ಐ ಕಾರ್ಯಕರ್ತರು ಕನ್ನಡ ಶಾಲೆ ಉಳಿಸಿ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸಿಎಂ ಬರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಿಗಿ ಭದ್ರತೆಯ ನಡುವೆಯೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು.
ಕಲಬುರಗಿ, ಸೆಪ್ಟೆಂಬರ್ 17: ಕಲಬುರಗಿಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್ಎಫ್‌ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ ಮಾಡಲು ಸಿಎಂ ಬರಲಿರುವ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪ್ರತಿಭಟನಾಕಾರರು, ಕನ್ನಡ ಶಾಲೆ ಉಳಿಸಿ ಎಂದು ಘೋಷಣೆ ಕೂಗಿ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

