ಕನ್ನಡ ಶಾಲೆ ಉಳಿಸಲು ಆಗ್ರಹ: ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ

Edited By:

Updated on: Sep 17, 2026 | 12:13 PM

ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಗೂ ಮುನ್ನ ಎಸ್ಎಫ್‌ಐ ಕಾರ್ಯಕರ್ತರು ಕನ್ನಡ ಶಾಲೆ ಉಳಿಸಿ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸಿಎಂ ಬರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಿಗಿ ಭದ್ರತೆಯ ನಡುವೆಯೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು.

ಕಲಬುರಗಿ, ಸೆಪ್ಟೆಂಬರ್​​ 17: ಕಲಬುರಗಿಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಬರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ ಮಾಡಲು ಸಿಎಂ ಬರಲಿರುವ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪ್ರತಿಭಟನಾಕಾರರು, ಕನ್ನಡ ಶಾಲೆ ಉಳಿಸಿ ಎಂದು ಘೋಷಣೆ ಕೂಗಿ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More