22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್
ನಿರ್ದೇಶಕ ನಂದ ಕಿಶೋರ್ ಅವರು ನಟ ಶಬರೀಶ್ ಶೆಟ್ಟಿಗೆ 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ಅವರು ದೂರು ಕೊಟ್ಟಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ ಬಂದಿರುವುದು ಯಾಕೆ? ಇದಕ್ಕೆ ಶಬರೀಶ್ ಶೆಟ್ಟಿ ಉತ್ತರಿಸಿದ್ದಾರೆ.
ನಟ ಶಬರೀಶ್ ಶೆಟ್ಟಿ ಅವರಿಗೆ ನಿರ್ದೇಶಕ ನಂದ ಕಿಶೋರ್ (Nanda Kishore) 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಬಂದಿರುವುದು ಯಾಕೆ ಎಂಬದನ್ನು ಶಬರೀಶ್ ಶೆಟ್ಟಿ ವಿವರಿಸಿದ್ದಾರೆ. ‘ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂದ ಕಿಶೋರ್ ನನ್ನ ಬಳಿ ಹಣ ಪಡೆದರು. ಆದರೆ ನನಗೆ ಮೋಸ ಆಗಿದೆ. ಚಿತ್ರರಂಗ ಒಂದು ಕುಟುಂಬದಂತೆ. ಹಾಗಾಗಿ ಕುಟುಂಬದ ಒಳಗೆ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳೋಣ ಅಂತ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದೇನೆ. ಇಲ್ಲಿ ನ್ಯಾಯ ಸಿಗದೇ ಇದ್ದರೆ ಕಾನೂನಿನ ಮೊರೆ ಹೋಗುತ್ತೇನೆ’ ಎಂದು ಶಬರೀಶ್ ಶೆಟ್ಟಿ (Shabarish Shetty) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ

ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು

ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
