INDW vs ENGW: ಥೇಟ್ ರೋಹಿತ್ ಶರ್ಮಾ ರೀತಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಶಫಾಲಿ: ರೋಚಕ ವಿಡಿಯೋ ನೋಡಿ
Shafali Verma, India Women vs England Women: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿ ಬ್ಯಾಟ್‌ನಿಂದ ಆಕರ್ಷಕ ಅರ್ಧಶತಕ ಪೂರೈಸಿದರು. ಶಫಾಲಿ ಸ್ಫೋಟಕ ಆಟ ನೋಡಲು ಥೇಟ್ ರೋಹಿತ್ ಶರ್ಮಾ ರೀತಿಯಿತ್ತು.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವನಿತೆಯರ ವಿರುದ್ಧ ಭಾರತ ವನಿತೆಯರು (India Women vs England Women) ದೊಡ್ಡ ಸೋಲು ಕಂಡಿರು. 198 ರನ್‌ಗಳ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್‌ಗೆ ಹೋರಾಟವೇ ನೀಡಲಿಲ್ಲ. ಆದಾಗ್ಯೂ, ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಏಕಾಂಗಿ ಹೋರಾಟ ನಡೆಸಿ ಬ್ಯಾಟ್‌ನಿಂದ ಆಕರ್ಷಕ ಅರ್ಧಶತಕ ಪೂರೈಸಿದರು. ಶಫಾಲಿ ಸ್ಫೋಟಕ ಆಟ ನೋಡಲು ಥೇಟ್ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಶೈಲಿಯಂತೆ ಇತ್ತು. ಬಲಗೈ ಬ್ಯಾಟರ್ 42 ಎಸೆತಗಳಲ್ಲಿ ಒಂಬತ್ತು ಬೌಂಡರಿಗಳೊಂದಿಗೆ 52 ರನ್ ಗಳಿಸಿದರು. ಶಫಾಲಿ ವರ್ಮಾ ಅವರ ಸ್ಫೋಟಕ ಆಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ