AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಝಾಹಿರ್ ಯೂಸುಫ್
|

Updated on: Feb 01, 2026 | 10:58 AM

Share

Haryana vs Bengal: 294 ರನ್​ಗಳ ಗುರಿ ಪಡೆದ ಹರ್ಯಾಣ ತಂಡವನ್ನು ಮತ್ತೊಮ್ಮೆ ಕಟ್ಟಿ ಹಾಕುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಎಸೆದ ಶಹಬಾಝ್ 38 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಹರ್ಯಾಣ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 105 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಬೆಂಗಾಲ್ ತಂಡವು 188 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ರಣಜಿ ಟೂರ್ನಿಯ ಎಲೈಟ್ ಗ್ರೂಪ್-ಸಿ ಪಂದ್ಯದಲ್ಲಿ ಹರ್ಯಾಣ ವಿರುದ್ಧ ಶಹಬಾಝ್ ಅಹ್ಮದ್ ಬರೋಬ್ಬರಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 193 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಹರ್ಯಾಣ ತಂಡವನ್ನು ಕೇವಲ 100 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಶಹಬಾಝ್ ಅಹ್ಮದ್ ಪ್ರಮುಖ ಪಾತ್ರವಹಿಸಿದರು.

ಪ್ರಥಮ ಇನಿಂಗ್ಸ್​ನಲ್ಲಿ 11.1 ಓವರ್​ಗಳನ್ನು ಎಸೆದ ಶಹಬಾಝ್ ಅಹ್ಮದ್ ಕೇವಲ 42 ರನ್ ನೀಡಿ 5 ವಿಕೆಟ್ ಕಬಳಿಸಿದರು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಬೆಂಗಾಲ್ ತಂಡವು 200 ರನ್​ಗಳಿಸಲಷ್ಟೇ ಶಕ್ತರಾದರು.

ಅದರಂತೆ 294 ರನ್​ಗಳ ಗುರಿ ಪಡೆದ ಹರ್ಯಾಣ ತಂಡವನ್ನು ಮತ್ತೊಮ್ಮೆ ಕಟ್ಟಿ ಹಾಕುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 8 ಓವರ್​ಗಳನ್ನು ಎಸೆದ ಶಹಬಾಝ್ 38 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಹರ್ಯಾಣ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 105 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಬೆಂಗಾಲ್ ತಂಡವು 188 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಪಂದ್ಯದ ಎರಡು ಇನಿಂಗ್ಸ್​ಗಳ ಮೂಲಕ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.