ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್​ಗಳು: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ ನೋಡಿ

ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್​ಗಳು: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ ನೋಡಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Nov 20, 2024 | 11:36 AM

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ಹೋಗುತ್ತಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಪರದಾಡುವಂತೆ ಮಾಡಿತು. ಶಕ್ತಿ ಯೋಜನೆಯ ಪರಿಣಾಮ ಮಹಿಳಾ ಪ್ರಯಾಣಿಕರು ತುಂಬಿದ್ದುದೇ ಬಸ್ ನಿಲ್ಲಿಸದೇ ಇರಲು ಕಾರಣ ಎನ್ನಲಾಗಿದೆ. ವಿದ್ಯಾರ್ಥಿಗಳ ಪರದಾಟದ ವಿಡಿಯೋ ಇಲ್ಲಿದೆ.

ಚಿಕ್ಕಮಗಳೂರು, ನಬವೆಂಬರ್ 20: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ ಮಾರ್ಗವಾಗಿ ಮೂಡಿಗೆರೆಗೆ ಆಗಮಿಸಿದ, ಚಿಕ್ಕಮಗಳೂರು ನಗರಕ್ಕೆ ತೆರಳುವ ಬಹುತೇಕ ಬಸ್​​ಗಳು ಮಹಿಳಾ ಪ್ರಯಾಣಿಕರಿಂದ ತುಂಬಿದ್ದವು. ಹೀಗಾಗಿ ಮೂಡಿಗೆರೆ ನಿಲ್ದಾಣದಲ್ಲಿ ಸ್ಟಾಪ್ ನೀಡದೆ ತೆರಳಿವೆ. ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಹೆಚ್ಚುವರಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದು, ಕೆಎಸ್​ಆರ್​ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ ಕೆಎಸ್​ಆರ್​ಟಿಸಿ ವಿಭಾಗದ ಟಿಸಿಯೊಂದಿಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತೆರಳುತ್ತಿದ್ದು, ಬಸ್​​ಗಳು ರಷ್ ಆಗಿವೆ. ಇದು ವಿದ್ಯಾರ್ಥಿಗಳನ್ನ ಸಂಕಷ್ಟಕ್ಕೆ ದೂಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ