Shakti Scheme: ಶ್ರೀ ಧರ್ಮಸ್ಥಳ, ಕುಕ್ಕೆಗೆ ಹರಿದು ಬರುತ್ತಿರುವ ಮಹಿಳಾ ಭಕ್ತರ ದಂಡು

ಮಹಿಳೆಯರಿಗೆ ಉಚಿತ ಬಸ್ ಜೊತೆಗೆ ವೀಕೆಂಡ್ ಇರುವ ಕಾರಣ ದೇವಸ್ಥಾನಗಳತ್ತ ಹೆಚ್ಚಿನ ಮಂದಿ ಮುಖ ಮಾಡಿದ್ದಾರೆ. ಅಲ್ಲದೆ ಇಂದು ಅಮವಾಸ್ಯೆ ಹಿನ್ನೆಲೆ ದರ್ಶನಕ್ಕೆ ಮುಗಿಬಿದ್ದಿದ್ದಾರೆ.

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳತ್ತ ಮಹಿಳೆಯರು ಹರಿದು ಬರ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಮಹಿಳೆಯರು ತುಂಬಿ ತುಳುಕುತ್ತಿದ್ದು, ಬಹುತೇಕ ಉತ್ತರ ಕರ್ನಾಟಕ ಭಾಗದಿಂದಲೇ ಬಂದವರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಜನವೋ ಜನ ಸೇರಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಕೂಡ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರಿಗೆ ಉಚಿತ ಬಸ್ ಜೊತೆಗೆ ವೀಕೆಂಡ್ ಇರುವ ಕಾರಣ ದೇವಸ್ಥಾನಗಳತ್ತ ಹೆಚ್ಚಿನ ಮಂದಿ ಮುಖ ಮಾಡಿದ್ದಾರೆ. ಅಲ್ಲದೆ ಇಂದು ಅಮವಾಸ್ಯೆ ಹಿನ್ನೆಲೆ ದರ್ಶನಕ್ಕೆ ಮುಗಿಬಿದ್ದಿದ್ದಾರೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us