ಮಹಿಳೆಯರ ಸಬಲೀಕರಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯನ್ನು ನಿಲ್ಲಿಸಲ್ಲ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

|

Updated on: Oct 31, 2024 | 7:41 PM

ಗ್ಯಾರಂಟಿ ಯೋಜನೆಗಳ ಬಗ್ಗೆ ಯೋಚನೆ ಮಾಡಿದ್ದೇ ಡಿಕೆ ಶಿವಕುಮಾರ್, ಬೆಲೆಯೇರಿಕೆಯಿಂದ ತತ್ತರಿಸಿದ್ದ ಮಹಿಳೆಯರು ಪರಿಸ್ಥಿತಿಯೊಂದಿಗೆ ಏಗಲು ಮತ್ತು ಆರ್ಥಿಕವಾಗಿ ಅವರಲ್ಲಿ ಬಲ ತುಂಬಲು ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು, ಬೇರೆ ರಾಜ್ಯಗಳು ಕರ್ನಾಟಕವನ್ನು ಮಾದರಿಯನ್ನಾಗಿಸಿಕೊಂಡಿವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಡುಪಿ: ಸರ್ಕಾರ ಘೋಷಿಸಿರುವ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು, ಯಾವುದನ್ನೂ ನಿಲ್ಲಿಸುವ ಯೋಚನೆ ಸರ್ಕಾರಕ್ಕಿಲ್ಲ, ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮಹಿಳೆಯರನ್ನು ಸಬಲೀಕರರಣಗೊಳಿಸುವ ದೃಷ್ಟಿಯಿಂದ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ, ಒಂದೆರಡು ಸ್ಥಿತಿವಂತ ಮಹಿಳೆಯರು ಬೇಡ ನಿಲ್ಲಿಸಿ ಅಂತ ಹೇಳಿರಬಹುದು, ಅವರು ಬೇಕಿದ್ದರೆ ಟಿಕೆಟ್ ಖರೀದಿಸಿ ಪ್ರಯಾಣಿಸಲಿ, ಅದರೆ ಲಕ್ಷಾಂತರ ಬಡ ಮಹಿಳೆಯರು ಯೋಜನೆಯ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಿಎಸ್​ಟಿ ಮತ್ತು ಆದಾಯ ತೆರಿಗೆ ಪಾವತಿಸುವವರ ಹೆಸರುಗಳು ಮಾತ್ರ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್: ಲಕ್ಷ್ಮಿ ಹೆಬ್ಬಾಳ್ಕರ್