ಒಂದು ಆಧಾರ್ ಕಾರ್ಡ್ನ ಎರಡು ಪ್ರತಿಗಳನ್ನು ತೋರಿಸಿ KSRTCಯಲ್ಲಿ ಪ್ರಯಾಣ, ಸಿಕ್ಕಿಬಿದ್ದ ಇಬ್ಬರು ಮಹಿಳೆಯರು
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಶಕ್ತಿ ಯೋಜನೆಯು ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುತ್ತಿದೆ. ಆಧಾರ್ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಒಂದೇ ನಂಬರ್ನ ಎರಡು ಆಧಾರ್ ಕಾರ್ಡ್ಗಳನ್ನು ತೋರಿಸಿ ಪ್ರಯಾಣಿಸಲು ಯತ್ನಿಸಿದ ಇಬ್ಬರು ಮಹಿಳೆಯರು ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿದ್ದಾರೆ.
ಹುಬ್ಬಳ್ಳಿ, ಡಿ.10: ಶಕ್ತಿ ಯೋಜನೆಯಡಿ (Shakti Scheme) ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಹೀಗಿದ್ದಾಗಲೂ ಇಬ್ಬರು ಮಹಿಳೆಯರು ಮೋಸ ಮಾಡಿ ಪ್ರಯಾಣ ಮಾಡಲು ಮುಂದಾಗಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು, ಹುಬ್ಬಳ್ಳಿಯ (Hubballi) ನೇಕಾರ ನಗರದಿಂದ ಕಿಮ್ಸ್ ಕಡೆಗೆ ಹೋಗುವ ಬಸ್ನಲ್ಲಿ ಬುರ್ಖಾ ಹಾಕಿರುವ ಇಬ್ಬರು ಮುಸ್ಲಿಂ ಮಹಿಳೆಯರು ಒಂದೇ ಆಧಾರ್ ಕಾರ್ಡ್ನ ಎರಡು ಪ್ರತಿಗಳನ್ನು ತೋರಿಸಿ ಪ್ರಯಾಣಿಸುತ್ತಿದ್ದಾಗ ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos