ಶಕ್ತಿ ಯೋಜನೆ ಇನ್ನೂ 10 ವರ್ಷಗಳ ಕಾಲ ಜಾರಿಯಲ್ಲಿರುತ್ತದೆ, ಮಹಿಳೆಯರು ಆತಂಕಪಡುವ, ಗಾಬರಿಯಾಗುವ ಅವಶ್ಯಕತೆಯಿಲ್ಲ: ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Aug 16, 2023 | 7:31 PM

ಪಾಪ, ಮಹಿಳೆಯರು ಬಸ್ ಸ್ಟಾಪ್​ಗಳಲ್ಲಿರುವ ಟ್ರಾಫಿಕ್ ಕಂಟ್ರೋಲರ್ ಗಳ ಜೊತೆ ಗಾಬರಿಯಿಂದ ವಿಚಾರಿಸುತ್ತಿದ್ದಾರಂತೆ. ಹಾಗಾಗಿ ಯಾರೂ, ಅದರಲ್ಲೂ ವಿಶೆಷವಾಗಿ ಮಹಿಳೆಯರು ಮತ್ತು ಶಾಲಾ ಮಕ್ಕಳು ಈ ಸುದ್ದಿಯನ್ನು ನಂಬಬೇಕಿಲ್ಲ ಎಂದು ಸಚಿವರು ಹೇಳಿದರು,

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಜಾರಿಗೊಳಿಸಿರುವ ಶಕ್ತಿ ಯೋಜನೆ (Shakti Scheme) ಯಾವ ಕಾರಣಕ್ಕೂ ನಿಂತುಹೋಗೋದಿಲ್ಲ, ಇನ್ನು ಹತ್ತು ವರ್ಷಗಳ ಕಾಲ ನಿರಂತರವಾಗಿ ಜಾರಿಯಲ್ಲಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು. ನಗರದಲ್ಲಿಂದು ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಂಗಳೂರಿನ ಕಾಂಗ್ರೆಸ್ ಶಾಸಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ರಾಮಲಿಂಗಾರೆಡ್ಡಿ, ಒಂದು ನಿರ್ದಿಷ್ಟ ಪಕ್ಷ ಸುಖಾಸುಮ್ಮನೆ ಸಾಮಾಜಿಕ ಜಾಲತಾಣಗಳ ಮೂಲಕ ಶಕ್ತಿ ಯೋಜನೆ ನಿಂತು ಹೋಗುತ್ತದೆ ಅಂತ ಅಪಪ್ರಚಾರ ಮಾಡುತ್ತಿದೆ. ಪಾಪ, ಮಹಿಳೆಯರು ಬಸ್ ಸ್ಟಾಪ್ ಗಳಲ್ಲಿರುವ ಟ್ರಾಫಿಕ್ ಕಂಟ್ರೋಲರ್ ಗಳ ಜೊತೆ ಗಾಬರಿಯಿಂದ ವಿಚಾರಿಸುತ್ತಿದ್ದಾರಂತೆ. ಹಾಗಾಗಿ ಯಾರೂ, ಅದರಲ್ಲೂ ವಿಶೆಷವಾಗಿ ಮಹಿಳೆಯರು ಮತ್ತು ಶಾಲಾ ಮಕ್ಕಳು ಈ ಸುದ್ದಿಯನ್ನು ನಂಬಬೇಕಿಲ್ಲ ಮತ್ತು ಮಹಿಳೆಯರು ಪಾಸ್ ಮಾಡಿಸುವ ಅವಶ್ಯಕತೆಯೂ ಇಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.