AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಕ್ಷಯ್​ ಪಲ್ಲಮಜಲು​​
|

Updated on: Jan 12, 2026 | 10:48 AM

Share

ಶಕ್ತಿ ಯೋಜನೆಯ ಪರಿಣಾಮದಿಂದ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿದ್ದಾರೆ. ಕೊಪ್ಪಳ ಬಸ್ ನಿಲ್ದಾಣದಲ್ಲಿ ಮಹಿಳೆಯರ ದಟ್ಟಣೆ ಕಂಡುಬಂದಿದ್ದು, ಬಸ್‌ಗಳ ಕೊರತೆಯಿಂದ ಪರದಾಟ, ನೂಕಾಟ ಮತ್ತು ತಳ್ಳಾಟ ನಡೆಯಿತು. ಗದಗ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಭಕ್ತರು ಬಂದಿದ್ದರು.

ಕೊಪ್ಪಳ, ಜ.12: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಸಾರ್ವಜನಿಕ ಸಾರಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಈ ಯೋಜನೆಯಿಂದಾಗಿ ರಾಜ್ಯದ ವಿವಿಧೆಡೆ, ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರ ದಟ್ಟಣೆ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು, ಇದೀಗ ಕೊಪ್ಪಳ ಬಸ್ ನಿಲ್ದಾಣದಲ್ಲಿ ಗಣನೀಯವಾಗಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬಸ್ ನಿಲ್ದಾಣದ ತುಂಬೆಲ್ಲಾ ಮಹಿಳೆಯರೇ ಕಂಡುಬಂದಿದ್ದಾರೆ. ನಿನ್ನೆ ಸಂಜೆ ಕೊಪ್ಪಳ ಬಸ್ ನಿಲ್ದಾಣದಲ್ಲಿ ಬಸ್‌ಗಳ ಕೊರತೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸಿದರು. ಗದಗ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭಕ್ತರು, ವಿಶೇಷವಾಗಿ ಮಹಿಳೆಯರು, ತಮ್ಮ ಊರುಗಳಿಗೆ ತೆರಳಲು ಬಸ್‌ಗಳಲಿಲ್ಲದೆ ಸಂಕಷ್ಟಕ್ಕೆ ಸಿಲುಕಿದರು. ಬಸ್ ನಿಲ್ದಾಣದಲ್ಲಿನ ಅತಿಯಾದ ಜನಸಂದಣಿಯಿಂದಾಗಿ, ಬಸ್ ಹತ್ತುವ ಸಂದರ್ಭದಲ್ಲಿ ಮಹಿಳಾ ಭಕ್ತರ ನಡುವೆ ನೂಕಾಟ ಮತ್ತು ತಳ್ಳಾಟದಂತಹ ಸನ್ನಿವೇಶಗಳು ನಡೆದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ