ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್​ನಲ್ಲಿ ಮಹಿಳೆಯರ ಫೈಟ್; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 4:32 PM

ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​(Bus)ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ​ ಜಾರಿ ಮಾಡಿದ ಹಿನ್ನಲೆ ಸೀಟ್​ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್​ವೊಂದರಲ್ಲಿ ಯಾವುದೇ ಸೀಟ್​ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್​ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ ಜಗಳ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More