ಬಿವೈ ರಾಘವೇಂದ್ರ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ ಮಾತು ವೈಯಕ್ತಿಕವಾದದ್ದು: ಜಿ ಪರಮೇಶ್ವರ್, ಗೃಹ ಸಚಿವ

|

Updated on: Jan 27, 2024 | 1:42 PM

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಒಂದು ಸಮಿತಿಯನ್ನು ಸರ್ಕಾರ ರಚಿಸಿದ್ದರೆ ಅದರಲ್ಲಿ ತಪ್ಪೇನಿದೆ ಎಂದ ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರದ ಕೆಲಸ, ಹಾಗಾಗಿ ಅಧಿಕಾರಿಗಳ ಸಮನ್ವಯತೆಯೊಂದಿಗೆ ಯೋಜನೆಗಳ ಕಟ್ಟುನಿಟ್ಟಿನ ಜಾರಿಯನ್ನು ಸಮಿತಿ ನೋಡಿಕೊಳ್ಳುತ್ತದೆ ಎಂದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು ನಿನ್ನೆ ಶಿವಮೊಗ್ಗದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಪಕ್ಷದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಆಡಿರುವ ಮಾತು ವೈಯಕ್ತಿಕವಾದದ್ದು ಎಂದು ಹೇಳಿದರು. ಶಿವಮೊಗ್ಗದ ಬಿಜೆಪಿ ಸಂಸದ ಬಿವೈ ರಾಘವೇಂದ್ರ (BY Raghavendra) ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಜನ ಅವರನ್ನೇ ಆರಿಸಬೇಕು ಅಂತ ಹೇಳಿದ್ದು ಕಾಂಗ್ರೆಸ್ ನಾಯಕರಲ್ಲಿ ಇರುಸು ಮುರುಸು ಉಂಟುಮಾಡಿದೆ. ಅವರಾಡಿರುವ ಮಾತಿನ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಪರಮೇಶ್ವರ್, ಅದು ಅವರ ವೈಯಕ್ತಿಕ ಅಭಿಪ್ರಾಯ ಅಂತ ಹೇಳಿದರು. ನಿಗಮ ಮಂಡಳಿ ಅಧ್ಯಕ್ಷ ನೇಮಕಗಳ ಬಗ್ಗೆ ಕೆಲ ಶಾಸಕರಲ್ಲಿ ಅಸಮಾಧಾನ ಮೂಡಿದೆ ಅಂತ ಕೇಳಿದ್ದಕ್ಕೆ ಅವರು, ಈಗಾಗಲೇ ಪಟ್ಟಿ ಪ್ರಕಟಗೊಂಡಿರುವುದರಿಂದ ಪ್ರಶ್ನೆ ಅಪ್ರಸ್ತುತ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಒಂದು ಸಮಿತಿಯನ್ನು ಸರ್ಕಾರ ರಚಿಸಿದ್ದರೆ ಅದರಲ್ಲಿ ತಪ್ಪೇನಿದೆ ಎಂದ ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರದ ಕೆಲಸ, ಹಾಗಾಗಿ ಅಧಿಕಾರಿಗಳ ಸಮನ್ವಯತೆಯೊಂದಿಗೆ ಯೋಜನೆಗಳ ಕಟ್ಟುನಿಟ್ಟಿನ ಜಾರಿಯನ್ನು ಸಮಿತಿ ನೋಡಿಕೊಳ್ಳುತ್ತದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on