ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪನವರು (Shamanur Shivashankarappa) ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರು. ವೀರಶೈವ ಲಿಂಗಾಯತ (Veerashaiva Lingayat) ಸಮುದಾಯದ ಪ್ರಭಾವಿ ಲೀಡರ್ ಆಗಿರುವ ಅವರ ಮಾತುಗಳಿಗೆ ಭಾರೀ ತೂಕವಿರುತ್ತವೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಸಮುದಾಯದವರಿಗೆ 70 ಟಿಕೆಟ್ ನೀಡಬೇಕೆಂಬ ಆಗ್ರಹ ಕೆಪಿಸಿಸಿಗೆ ಮಾಡಿದ್ದಾರೆ. ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿರುವ ವಿ ಸೋಮಣ್ಣ (V Somanna) ಕಾಂಗ್ರೆಸ್ ಸೇರುವ ಬಗ್ಗೆ ದಟ್ಟ ವದಂತಿ ಹರಡಿದೆ. ಅವರು ಪಕ್ಷಕ್ಕೆ ಸೇರಿದರೆ ಬೆಂಗಳೂರು ರಾಜಾಜಿನಗರ ಕ್ಷೇತ್ರ ಅವರಿಗೆ ಬಿಟ್ಟುಕೊಡಲಾಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ತಮ್ಮ ಅಭ್ಯಂತರವೇನೂ ಇಲ್ಲವೆಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ