Assembly Polls: ವಿ ಸೋಮಣ್ಣ ಕಾಂಗ್ರೆಸ್ ಸೇರಿದರೆ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಅಭ್ಯಂತರವಿಲ್ಲವೆಂದ ಶಾಮನೂರು ಶಿವಶಂಕರಪ್ಪ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Mar 07, 2023 | 4:26 PM

ಅವರು ಪಕ್ಷಕ್ಕೆ ಸೇರಿದರೆ ಬೆಂಗಳೂರು ರಾಜಾಜಿನಗರ ಕ್ಷೇತ್ರ ಅವರಿಗೆ ಬಿಟ್ಟುಕೊಡಲಾಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ತಮ್ಮ ಅಭ್ಯಂತರವೇನೂ ಇಲ್ಲವೆಂದರು.

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪನವರು (Shamanur Shivashankarappa) ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರು. ವೀರಶೈವ ಲಿಂಗಾಯತ (Veerashaiva Lingayat) ಸಮುದಾಯದ ಪ್ರಭಾವಿ ಲೀಡರ್ ಆಗಿರುವ ಅವರ ಮಾತುಗಳಿಗೆ ಭಾರೀ ತೂಕವಿರುತ್ತವೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಸಮುದಾಯದವರಿಗೆ 70 ಟಿಕೆಟ್ ನೀಡಬೇಕೆಂಬ ಆಗ್ರಹ ಕೆಪಿಸಿಸಿಗೆ ಮಾಡಿದ್ದಾರೆ. ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿರುವ ವಿ ಸೋಮಣ್ಣ (V Somanna) ಕಾಂಗ್ರೆಸ್ ಸೇರುವ ಬಗ್ಗೆ ದಟ್ಟ ವದಂತಿ ಹರಡಿದೆ. ಅವರು ಪಕ್ಷಕ್ಕೆ ಸೇರಿದರೆ ಬೆಂಗಳೂರು ರಾಜಾಜಿನಗರ ಕ್ಷೇತ್ರ ಅವರಿಗೆ ಬಿಟ್ಟುಕೊಡಲಾಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ತಮ್ಮ ಅಭ್ಯಂತರವೇನೂ ಇಲ್ಲವೆಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 03:23 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.