AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಶಿವಶಂಕರಪ್ಪ ನಿಧನ: ಅಂತಿಮ ದರ್ಶನದ ಲೈವ್​​ ವಿಡಿಯೋ ಇಲ್ಲಿದೆ

ಶಾಮನೂರು ಶಿವಶಂಕರಪ್ಪ ನಿಧನ: ಅಂತಿಮ ದರ್ಶನದ ಲೈವ್​​ ವಿಡಿಯೋ ಇಲ್ಲಿದೆ

ಅಕ್ಷಯ್​ ಪಲ್ಲಮಜಲು​​
|

Updated on:Dec 15, 2025 | 11:20 AM

Share

ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಲ್ಲಿಕಾರ್ಜುನ್ ನಿವಾಸದಲ್ಲಿ ಹಾಗೂ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ 5:30ರೊಳಗೆ ಆನೆಕೊಂಡದಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಲಿದೆ. ಈ ಘಟನೆಯ ಸಂಪೂರ್ಣ ವಿವರ ಮತ್ತು ಅಂತಿಮ ನಮನದ ಮಾಹಿತಿಗಾಗಿ ಲೈವ್ ಅಪ್‌ಡೇಟ್‌ಗಳನ್ನು ವೀಕ್ಷಿಸಿ.

ದಾವಣಗೆರೆ, ಡಿ15: ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಬೆಳಗ್ಗೆ 7 ರಿಂದ 12 ರ ವರೆಗೆ ಶಾಮನೂರ ಪುತ್ರ ಸಚಿವ ಎಸ್​​ಎಸ್​​ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಪಾರ್ಥಿವ ಶರೀರ ಇರಲಿದೆ. ಅಭಿಮಾನಿಗಳು, ಕುಟುಂಬದವರಿಂದ ಅಂತಿಮ ನಮನ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಸಂಜೆ 4 ಗಂಟೆವರೆಗೆ ನಗರದ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲಿಂದ ಮೆರವಣಿಗೆ ಮೂಲಕ‌ ಪಾರ್ಥಿವ ಶರೀರವನ್ನು ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತರಲಾಗುತ್ತದೆ. ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 15, 2025 10:56 AM
Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More