ಶಾಮನೂರು ಶಿವಶಂಕರಪ್ಪ ನಿಧನ: ಅಂತಿಮ ದರ್ಶನದ ಲೈವ್ ವಿಡಿಯೋ ಇಲ್ಲಿದೆ
ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಲ್ಲಿಕಾರ್ಜುನ್ ನಿವಾಸದಲ್ಲಿ ಹಾಗೂ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ 5:30ರೊಳಗೆ ಆನೆಕೊಂಡದಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಲಿದೆ. ಈ ಘಟನೆಯ ಸಂಪೂರ್ಣ ವಿವರ ಮತ್ತು ಅಂತಿಮ ನಮನದ ಮಾಹಿತಿಗಾಗಿ ಲೈವ್ ಅಪ್‌ಡೇಟ್‌ಗಳನ್ನು ವೀಕ್ಷಿಸಿ.
ದಾವಣಗೆರೆ, ಡಿ15: ಕಾಂಗ್ರೆಸ್‌ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಬೆಳಗ್ಗೆ 7 ರಿಂದ 12 ರ ವರೆಗೆ ಶಾಮನೂರ ಪುತ್ರ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಪಾರ್ಥಿವ ಶರೀರ ಇರಲಿದೆ. ಅಭಿಮಾನಿಗಳು, ಕುಟುಂಬದವರಿಂದ ಅಂತಿಮ ನಮನ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಸಂಜೆ 4 ಗಂಟೆವರೆಗೆ ನಗರದ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತರಲಾಗುತ್ತದೆ. ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 15, 2025 10:56 AM
