ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ

ಒಂದೆಡೆ ಸಿಎಂ ಹುದ್ದೆಯ ಆಕಾಂಕ್ಷಿತನದ ಬಗ್ಗೆ ಮಾತನಾಡಬಾರದು ಎಂದು ಕರ್ನಾಟಕದ ಕಾಂಗ್ರೆಸ್​ ನಾಯಕರಿಗೆ ಸೂಚನೆ ನೀಡಬೇಕು ಎಂದು ಕೋರಿ ರಾಜ್ಯದ ಕೆಲವು ನಾಯಕರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ತಾವೂ ಸಿಎಂ ಆಗಲು ರೆಡಿ ಎಂದಿದ್ದಾರೆ.

ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
| Updated By: ಗಣಪತಿ ಶರ್ಮ

Updated on:Sep 11, 2024 | 2:40 PM

ದಾವಣಗೆರೆ, ಸೆಪ್ಟೆಂಬರ್ 11: ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನು ಕೂಡ ಸ್ಪರ್ಧೆ ಮಾಡುವೆ ಎಂದು ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್,​ ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಶಾಸಕರು ಯಾರಿಗೆ ಬಹುಮತ ನೀಡ್ತಾರೋ ಅವರನ್ನು ಹೈಕಮಾಂಡ್ ಒಪ್ಪುತ್ತದೆ. ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಹೈಕಮಾಂಡ್ ಆಶೀರ್ವಾದ ಇರುವ ವರೆಗೂ ಅವರೇ ಸಿಎಂ ಆಗಿರಲಿ. ಕೆಲವರು ಬಾಯಿಗೆ ಬಂದಂತೆ ಮಾತನಾಡುವುದರಿಂದ ಪ್ರಯೋಜನವಿಲ್ಲ. ಹಾಗೆ ಹೇಳಿಕೆ ನೀಡಿದವರೇ ಹಗುರ ಆಗುತ್ತಾರೆ ಎಂದು ಶಾಮನೂರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Wed, 11 September 24

Follow us