‘11 ವರ್ಷಗಳ ಹಿಂದೆ ಹೀಗಿರಲಿಲ್ಲ, ನನ್ನ ಬಗ್ಗೆ ಹೆಮ್ಮೆ ಇದೆ’; ಶಾನ್ವಿ ಶ್ರೀವಾಸ್ತವ

Updated on: Jul 31, 2023 | 11:38 AM

ಶಾನ್ವಿ ಶ್ರೀವಾಸ್ತವ ಅವರು ಗ್ಲಾಮರ್ ಲುಕ್​​ನಲ್ಲಿ ಎಲ್ಲರ ಗಮನ ಸೆಳೆದವರು. ಈಗ ಅವರು ‘ಬ್ಯಾಂಗ್’ ಚಿತ್ರದಲ್ಲಿ ನಟಿಸಿದ್ದು, ಗ್ಯಾಂಗಸ್ಟರ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ.

ಶಾನ್ವಿ ಶ್ರೀವಾಸ್ತವ (Shanvi Srivastava) ಅವರು ಗ್ಲಾಮರ್ ಲುಕ್​​ನಲ್ಲಿ ಎಲ್ಲರ ಗಮನ ಸೆಳೆದವರು. ಈಗ ಅವರು ‘ಬ್ಯಾಂಗ್’ ಚಿತ್ರದಲ್ಲಿ ನಟಿಸಿದ್ದು ಗ್ಯಾಂಗ್​ಸ್ಟರ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಅವರು 11 ವರ್ಷಗಳ ಹಿಂದೆ ಚಿತ್ರರಂಗಕ್ಕೆ ಕಾಲಿಟ್ಟರು. ಒಂದು ದಶಕದಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಬಗ್ಗೆ ಅವರು ಖುಷಿ ಹಂಚಿಕೊಂಡಿದ್ದಾರೆ. ‘11 ವರ್ಷಗಳ ಹಿಂದೆ ನಾನು ಚಿತ್ರರಂಗಕ್ಕೆ ಆಗತಾನೇ ಕಾಲಿಟ್ಟಿದ್ದೆ. ಆಗ ನನಗೆ ಏನು ಮಾತನಾಡಬೇಕು ಎಂದು ತಿಳಿಯುತ್ತಿರಲಿಲ್ಲ. ಈಗ ನನ್ನ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jul 31, 2023 11:34 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More