ಕೃಷ್ಣಂ ಪ್ರಣಯ ಸಖಿ ಸಿನಿಮಾ ನೋಡಲು ಬಂದ ಜನ ಸಾಗರ; ಶರಣ್ಯ ಶೆಟ್ಟಿಗೆ ಅಚ್ಚರಿ

Edited By:

Updated on: Aug 15, 2024 | 9:55 PM

ಗಣೇಶ್​-ಮಾಳವಿಕಾ ನಾಯರ್​ ಜೋಡಿಯಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ಶರಣ್ಯ ಶೆಟ್ಟಿ ಅವರ ಪಾತ್ರ ಕೂಡ ಹೈಲೈಟ್​ ಆಗಿದೆ. ಸಿನಿಮಾ ಬಿಡುಗಡೆ ಆಗಿದ್ದು, ಜನರಿಂದ ಮೆಚ್ಚುಗೆ ಸಿಕ್ಕಿದೆ. ಭಾರಿ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಸಿನಿಮಾ ನೋಡುತ್ತಿರುವುದನ್ನು ಕಂಡು ಶರಣ್ಯ ಶೆಟ್ಟಿ ಅವರು ಅಚ್ಚರಿಪಟ್ಟಿದ್ದಾರೆ. ಈ ವೇಳೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..

ಇಂದು (ಆಗಸ್ಟ್​ 15) ಬಿಡುಗಡೆ ಆಗಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಜನರು ಇಷ್ಟಪಟ್ಟಿದ್ದಾರೆ. ಈ ಚಿತ್ರದಲ್ಲಿ ಶರಣ್ಯ ಶೆಟ್ಟಿ ಕೂಡ ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ‘ಗೋಲ್ಡನ್​ ಸ್ಟಾರ್​’ ಗಣೇಶ್​ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಮೊದಲ ದಿನ ಮೊದಲ ಶೋ ನೋಡಲು ಜನ ಜಾತ್ರೆ ಸೇರಿದೆ. ಇದನ್ನು ಕಣ್ತುಂಬಿಕೊಂಡ ಶರಣ್ಯ ಶೆಟ್ಟಿ ಅವರಿಗೆ ಸಿಕ್ಕಾಪಟ್ಟೆ ಖುಷಿಯಾಗಿದೆ. ಚಿತ್ರಮಂದಿರದ ಮೇಲೆ ನಿಂತುಕೊಂಡು ಅವರು ಜನರ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ್ದಾರೆ. ‘ಇದು ನನಗೆ ಮೊದಲ ಅನುಭವ. ಇಷ್ಟು ಜನರು ಬಂದಿದ್ದನ್ನು ನಾನು ನೋಡಿರಲಿಲ್ಲ. ನಿಮ್ಮ ಸಿನಿಮಾ ಎಂಬ ಕಾರಣದಿಂದ ಮಾತ್ರವಲ್ಲ, ಕನ್ನಡ ಸಿನಿಮಾಗೆ ಇಷ್ಟು ಜನರು ಬಂದಿರುವುದೇ ಒಂದು ಸಂಭ್ರಮ ಆಗಿದೆ. ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಕೊನೆಗೂ ನನ್ನ ಜೀವನದಲ್ಲಿ ಇಂಥದ್ದೊಂದು ದಿನವನ್ನು ನೋಡುತ್ತಿದ್ದೇನಲ್ಲ ಅಂತ ಖುಷಿ ಆಗುತ್ತಿದೆ’ ಎಂದು ಶರಣ್ಯ ಶೆಟ್ಟಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More