ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

Updated on: Apr 04, 2026 | 9:29 AM

ಮಲಪ್ಪುರಂನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಚುನಾವಣಾ ಪ್ರಚಾರದ ಬೆಂಗಾವಲು ವಾಹನವನ್ನು ತಡೆದು, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಈ ಘಟನೆ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ನಡೆದಿದೆ. ಭದ್ರತಾ ಸಿಬ್ಬಂದಿಯ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿ, ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್‌ನಲ್ಲಿ ವೈರಲ್ ಆಗಿದ್ದು, ಕೇರಳ ಚುನಾವಣಾ ಕಣದಲ್ಲಿ ರಾಜಕೀಯ ಅಶಾಂತಿ ಹೆಚ್ಚಿಸಿದೆ.

ಕೇರಳ, ಏ.4: ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜತೆಗೆ ಅವರ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಎಕ್ಸ್​ ಖಾತೆಯಲ್ಲಿ ವೈರಲ್​​ ಆಗಿದೆ. ಶಶಿ ತರೂರ್ ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಯಿತು. ಭದ್ರತಾ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ವಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೂವರನ್ನು ಬಂಧಿಸಿ, ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಳಿಕಾವು ಮೂಲದ ಉಮ್ಮಾರ ಎಂಬ ಆರೋಪಿಯ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ. ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More