AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು

ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು

TV9 Web
| Edited By: |

Updated on: Oct 01, 2026 | 12:20 PM

Share

ಸಕ್ರೇಬೈಲು ಆನೆ ಬಿಡಾರದಲ್ಲಿದ್ದ 'ಶೌರ್ಯ' ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಕಾಲಿನ ಗಾಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೌರ್ಯ, ತಜ್ಞ ಪಶುವೈದ್ಯರ ಸಕಾಲಿಕ ಲಭ್ಯತೆ ಇಲ್ಲದ ಕಾರಣ ಸ್ಥಿತಿ ಬಿಗಡಾಯಿಸಿತು ಎಂಬ ಆರೋಪ ಕೇಳಿಬಂದಿದೆ. ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ, ಈ ಘಟನೆ ಶಿವಮೊಗ್ಗದಲ್ಲಿ ಆತಂಕ ಮೂಡಿಸಿದೆ.

ಶಿವಮೊಗ್ಗ, ಅ.1: ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಆನೆಗಳ ಆವಾಸಸ್ಥಾನವಾದ ಶಿವಮೊಗ್ಗದ ಸಕ್ರೇಬೈಲು ಆನೆ ಬಿಡಾರದಲ್ಲಿದ್ದ ‘ಶೌರ್ಯ’ ಹೆಸರಿನ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೌರ್ಯ ಆನೆಯ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಗಾಯ ಗುಣವಾಗದೆ ತೀವ್ರ ನೋವಿನಿಂದ ನರಳುತ್ತಿದ್ದ ಆನೆಗೆ ಬಿಡಾರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದೆ. ಸಕ್ರೇಬೈಲು ಬಿಡಾರದಲ್ಲಿ ಸೂಕ್ತ ಸಮಯಕ್ಕೆ ತಜ್ಞ ಪಶುವೈದ್ಯರ ಲಭ್ಯತೆ ಇಲ್ಲದಿರುವುದೇ ಆನೆಯ ಸ್ಥಿತಿ ಬಿಗಡಾಯಿಸಲು ಕಾರಣವಾಯಿತು ಎಂಬ ಆರೋಪಗಳು ಕೇಳಿಬಂದಿವೆ. ಆನೆ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಸಮ್ಮುಖದಲ್ಲಿ ಶೌರ್ಯ ಆನೆಯ ಮರಣೋತ್ತರ ಪರೀಕ್ಷೆ ಪ್ರಕ್ರಿಯೆಗಳು ಆರಂಭಗೊಂಡಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More