ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ, ಕಣ್ಣೀರಿಟ್ಟ ಪೌರಾಯುಕ್ತೆ
ಸಚಿವ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಫೋನ್ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ, (ಜನವರಿ 14): ಸಚಿವ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಫೋನ್ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ. ಅಮ್ಮನ್ ಅಕ್ಕನ್ ಅಂತ ಬಾಯಿಗೆ ಬಂದಂಗೆ ಕೆಟ್ಟ ಶಬ್ಧಗಳಿಂದ ಬೈದಿದ್ದಾರೆ, ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
