ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​​: ರಾಜೀವ್​ ಗೌಡ ಪರ ಸಚಿವ ಮುನಿಯಪ್ಪ ಬ್ಯಾಟಿಂಗ್​

Edited By:

Updated on: Jan 15, 2026 | 2:01 PM

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡ ನಿಂದನೆ ವಿಚಾರ ಸಂಬಂಧ ಸಚಿವ ಕೆ.ಎಚ್‌. ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಬ್ಯಾನರ್‌ಗಳನ್ನು ತೆಗೆಯದ ಮುನ್ಸಿಪಲ್ ಆಯುಕ್ತರು ತಮ್ಮ ಬ್ಯಾನರ್‌ಗಳನ್ನು ತೆಗೆದಿದ್ದಾರೆ ಎಂಬುದು ರಾಜೀವ್ ಗೌಡ ವಾದವಾಗಿತ್ತು. ರಾಜೀವ್ ಗೌಡ ಸೌಮ್ಯ ಸ್ವಭಾವದವರಾಗಿದ್ದು, ಕರೆದು ಆತನಿಗೆ ಬುದ್ಧಿ ಹೇಳುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡನಿಂದ ನಿಂದನೆ ವಿಚಾರ ಸಂಬಂಧ ಆರೋಪಿ ರಾಜೀವ ಗೌಡ ಪರ ಸಚಿವ ಕೆ. ಹೆಚ್. ಮುನಿಯಪ್ಪ ಬ್ಯಾಟಿಂಗ್​​ ಮಾಡಿದ್ದಾರೆ. ರಾಜೀವ್ ಗೌಡ ಸೌಮ್ಯ ಸ್ವಭಾವದವರಾಗಿದ್ದು, ಕರೆದು ಆತನಿಗೆ ಬುದ್ಧಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿ ಇರುವವರಿಗೆ ಯಾರೂ ಹೀಗೆ ಮಾತನಾಡಬಾರದು ಎಂದಿದ್ದಾರೆ. ಅಲ್ಲದೆ ಶಿಡ್ಲಘಟ್ಟದಲ್ಲಿ ಜೆಡಿಎಸ್​ನವರು ಈ ಹಿಂದೆ ಬ್ಯಾನರ್ ಹಾಕಿದಾಗ ತೆಗೆಸಿಲ್ಲ, ಆದರೆ ಈಗ ತೆಗೆದಿದ್ದಾರೆ ಅಂತಾ ರಾಜೀವ್ ಹೇಳ್ತಿದ್ದಾರೆ. ಆ ಅಧಿಕಾರಿ ಜೆಡಿಎಸ್​ ಪಕ್ಷದ ಪೋಸ್ಟರ್, ಬ್ಯಾನರ್ ತೆಗೆಯುತ್ತಿಲ್ಲ. ಕೇವಲ ಕಾಂಗ್ರೆಸ್​ ಬ್ಯಾನರ್​ ತೆಗೆದಿದ್ದಾರೆ ಎಂಬುದು ರಾಜೀವ್ ವಾದ ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 15, 2026 02:01 PM