AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 27, 2026 | 2:34 PM

Share

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ (shidlaghatta threatening case) ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (Rajeev Gowda) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀವ್​​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​​ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ (shidlaghatta threatening case) ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (Rajeev Gowda) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀವ್​​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​​ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ಮಾತನಾಡಿರುವ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ,
ಕೇರಳದಲ್ಲಿ ಪ್ರಮುಖ ಆರೋಪಿ ರಾಜೀವ್ ಗೌಡ ಬಂಧಿಸಲಾಗಿದೆ. ರಾಜೀವ್ ಗೌಡ ಜೊತೆಗಿದ್ದ ಮೈಕಲ್​ನನ್ನೂ ಬಂಧಿಸಲಾಗಿದೆ. ಆರೋಪಿ ಬಂಧನಕ್ಕೆ 3 ಪೊಲೀಸರ ತಂಡವನ್ನು ರಚಿಸಲಾಗಿತ್ತು.ವಿವಿಧ ಜಿಲ್ಲೆಗಳ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಲಾಗಿತ್ತು. ಮಂಗಳೂರಿನಿಂದ ಕೇರಳಕ್ಕೆ ಹೋಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಕೆಎ 03, ಎಂಎಕ್ಸ್​​ 9108 ಕಾರಿನಲ್ಲಿ ಪರಾರಿಯಾಗಿದ್ದ ರಾಜೀವ್ ಗೌಡ ಕಾರನ್ನು ಫಾಲೋ ಮಾಡಿ ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರಿಂದ ಯಾವುದೇ ವಿಷಯಗಳು, ಮಾಹಿತಿ ಸೋರಿಕೆ ಆಗಿಲ್ಲ. ನಮ್ಮ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಪೊಲೀಸರಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ