AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ: ವಿದ್ಯುತ್, ಕುಡಿಯುವ ನೀರಿಲ್ಲದೆ ಪರದಾಟ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ: ವಿದ್ಯುತ್, ಕುಡಿಯುವ ನೀರಿಲ್ಲದೆ ಪರದಾಟ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 07, 2026 | 5:28 PM

Share

ಗದಗ ಜಿಲ್ಲೆಯ ಶಿಗ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ 6 ವರ್ಷಗಳಿಂದ ದುಸ್ಥಿತಿಯಲ್ಲಿದೆ. ಜನರೇಟರ್ ಮತ್ತು ಯುಪಿಎಸ್ ಕೆಟ್ಟು ಕತ್ತಲು ಆವರಿಸಿದ್ದು, ಬಾಣಂತಿಯರು ಮತ್ತು ನವಜಾತ ಶಿಶುಗಳು ತೀವ್ರ ತೊಂದರೆಗೊಳಗಾಗಿದ್ದಾರೆ. ಶುದ್ಧ ಕುಡಿಯುವ ನೀರು, ಬಿಸಿನೀರು, ಮೂಲಭೂತ ಔಷಧಗಳು ಇಲ್ಲದೆ ರೋಗಿಗಳು ಮತ್ತು ವೈದ್ಯರು ಪರದಾಡುತ್ತಿದ್ದಾರೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ಗದಗ, ಅ.7: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಆರು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ದುಸ್ಥಿತಿಗೊಳಗಾಗಿದೆ. ಈ ಆಸ್ಪತ್ರೆ ಬಡ ರೋಗಿಗಳಿಗೆ ಸಂಜೀವಿನಿಯಾಗಬೇಕಿದ್ದರೂ, ನಿರ್ಲಕ್ಷ್ಯದಿಂದಾಗಿ ನರಕಸದೃಶವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಜನರೇಟರ್ ಕಳೆದ ಎರಡು ವರ್ಷಗಳಿಂದ ಕೆಟ್ಟು ನಿಂತಿದೆ. ಯುಪಿಎಸ್ ಬ್ಯಾಟರಿಗಳು ಕೂಡ ನಿಷ್ಪ್ರಯೋಜಕವಾಗಿವೆ. ಇದರಿಂದ ವಿದ್ಯುತ್ ಕೈಕೊಟ್ಟರೆ ಇಡೀ ಆಸ್ಪತ್ರೆ ಕತ್ತಲಲ್ಲಿ ಮುಳುಗುತ್ತದೆ. ಬಾಣಂತಿಯರು, ನವಜಾತ ಶಿಶುಗಳು ಮತ್ತು ಇತರೆ ರೋಗಿಗಳು ಕತ್ತಲಲ್ಲಿಯೇ ಪರದಾಡುವಂತಾಗಿದೆ. ಅಲ್ಲದೆ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಬಾಣಂತಿಯರಿಗೆ ಬಿಸಿನೀರಿನ ವ್ಯವಸ್ಥೆ ಇಲ್ಲ. ಹೆರಿಗೆಯ ನಂತರ ಶಿಶುಗಳನ್ನು ಒಣಗಿಸಲು ಬಳಸುವ ಡ್ರೈಯರ್ ಯಂತ್ರವೂ ಕಳೆದ ಒಂದು ವರ್ಷದಿಂದ ಕೆಟ್ಟು ನಿಂತಿದೆ. ಕನಿಷ್ಠ ಔಷಧಗಳು, ಡ್ರಿಪ್‌ ಪೈಪ್‌ಗಳು, ನೋವು ನಿವಾರಕಗಳು, ಆಂಟಿಬಯಾಟಿಕ್‌ಗಳು ಮತ್ತು ಹೆರಿಗೆ ಸಂದರ್ಭದ ಪ್ರಮುಖ ಇಂಜೆಕ್ಷನ್‌ಗಳು ಕೂಡ ಆಸ್ಪತ್ರೆಯಲ್ಲಿ ಲಭ್ಯವಿಲ್ಲ. ಇದರಿಂದ ರೋಗಿಗಳು ಹೊರಗಿನಿಂದ ಔಷಧಗಳನ್ನು ಖರೀದಿಸಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳ ಕುರಿತು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ. ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಈ ವಿಷಯದ ಬಗ್ಗೆ ಗಮನ ಹರಿಸಿ, ಆಸ್ಪತ್ರೆಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More