50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

Updated on: Mar 27, 2026 | 10:39 PM

50ನೇ ವಯಸ್ಸಿನಲ್ಲೂ ಫಿಟ್ ಆಗಿ ಕಾಣುವ ಶಿಲ್ಪಾ ಶೆಟ್ಟಿ ಅವರು ಶಿಸ್ತು ಪಾಲಿಸುತ್ತಾರೆ. ವರ್ಕೌಟ್ ವಿಚಾರದಲ್ಲಿ ಅವರು ರಾಜಿ ಆಗುವುದಿಲ್ಲ. ಹಾಗಾಗಿ ಅವರು ಈಗಲೂ ಕೂಡ ಹದಿಹರೆಯದ ಹುಡುಗಿಯಂತೆ ಕಾಣಿಸುತ್ತಾರೆ. ಈ ರೀತಿ ಅನೇಕ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ. 50ನೇ ವಯಸ್ಸಿನಲ್ಲೂ ಫಿಟ್ ಆಗಿ ಕಾಣುವ ಶಿಲ್ಪಾ ಶೆಟ್ಟಿ ಅವರು ಇಷ್ಟೆಲ್ಲ ಶಿಸ್ತು ಪಾಲಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More