ಶಿವಮೊಗ್ಗ: ಬೈಕ್ ಶೋ ರೂಮ್​ಗೆ ಆಕಸ್ಮಿಕ ಬೆಂಕಿ; 20 ಕ್ಕೂ ಹೆಚ್ಚು ಬೈಕ್​ಗಳಿಗೆ ಹಾನಿ, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 17, 2023 | 8:14 PM

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯಲ್ಲಿರುವ ಖಂಡಿಲ್ ಮೋಟಾರ್ಸ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್‌ಗಳು ಭಸ್ಮವಾದರೆ, 20 ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬಂದಿದ್ದು, ಬೆಂಕಿ ನಂದಿಸಿದ್ದಾರೆ.

ಶಿವಮೊಗ್ಗ, ಡಿ.17: ಬೈಕ್ ಶೋ ರೂಂ(Bike Showroom)ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್‌ಗಳು ಭಸ್ಮವಾದರೆ, 20 ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ(Thirthahalli)ಯಲ್ಲಿರುವ ಖಂಡಿಲ್ ಮೋಟಾರ್ಸ್‌ನಲ್ಲಿ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More