Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಿಂದ ಕೆಎಸ್ ಈಶ್ವರಪ್ಪ ಹೆಸರು ಕೈ ಬಿಟ್ಟ ಬಿಜೆಪಿ

ಶಿವಮೊಗ್ಗ: ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಿಂದ ಕೆಎಸ್ ಈಶ್ವರಪ್ಪ ಹೆಸರು ಕೈ ಬಿಟ್ಟ ಬಿಜೆಪಿ

TV9 Web
| Updated By: ಆಯೇಷಾ ಬಾನು

Updated on:Mar 18, 2024 | 2:13 PM

ಬಿ.ವೈ.ವಿಜಯೇಂದ್ರ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೆಸರು ಇಲ್ಲ. ವೇದಿಕೆಯಲ್ಲಿ ಪ್ರಧಾನಿ ಜೊತೆ 43 ಗಣ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆಯಲ್ಲಿ ಇರುವವರ ಪಟ್ಟಿಯಿಂದ ಈಶ್ವರಪ್ಪ ಹೆಸರನ್ನು ತೆಗೆದು ಹಾಕಲಾಗಿದೆ.

ಶಿವಮೊಗ್ಗ, ಮಾರ್ಚ್.18: ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narenda Modi) ಅವರು ಶಿವಮೊಗ್ಗದ ಫ್ರೀಡಂಪಾರ್ಕ್​ನ ಅಲ್ಲಮಪ್ರಭು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗಿಯಾಲಿದ್ದಾರೆ. ಈಗಾಗಲೇ ಬಿಜೆಪಿ ಸಮಾವೇಶದ ವೇದಿಕೆಗೆ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಎಂಎಲ್​ಸಿಗಳಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಆಗಮಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೆಸರು ಇಲ್ಲ. ವೇದಿಕೆಯಲ್ಲಿ ಪ್ರಧಾನಿ ಜೊತೆ 43 ಗಣ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆಯಲ್ಲಿ ಇರುವವರ ಪಟ್ಟಿಯಿಂದ ಈಶ್ವರಪ್ಪ ಹೆಸರನ್ನು ತೆಗೆದು ಹಾಕಲಾಗಿದೆ.

ಇಂದು ಪ್ರಧಾನಿ ಜೊತೆ ಜೆಡಿಎಸ್ ಶಾಸಕರಿಗೆ, ಜೆಡಿಎಸ್ ಪರಾಜಿತ ಅಭ್ಯರ್ಥಿಗಳಿಗೆ, ಬಿಜೆಪಿ ಮಾಜಿ ಶಾಸಕರಿಗೆ, ಮಾಜಿ ಎಂಎಲ್ಸಿಗಳಿಗೆ ಕೂಡಾ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಈಶ್ವರಪ್ಪ ಹೆಸರು ವೇದಿಕೆ ಮೇಲಿನ ಗಣ್ಯರ ಪಟ್ಟಿಯಿಂದ ಕೈಬಿಡಲಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Mar 18, 2024 02:12 PM