VIDEO: 6,6,6,6,6,6: ಸಿಕ್ಸ್ಗಳ ಸುರಿಮಳೆ, 39 ರನ್ ಚಚ್ಚಿದ ಹೆಟ್ಮೆಯರ್
Global Super League, 2025: ವಿಶ್ವದ ಪ್ರಮುಖ ಫ್ರಾಂಚೈಸಿ ತಂಡಗಳ ನಡುವಣ ಟಿ20 ಲೀಗ್ ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿದೆ. ಈ ಲೀಗ್ನಲ್ಲಿ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಬಿಗ್ ಬ್ಯಾಷ್ ಲೀಗ್ ಹಾಗೂ ಕೆರಿಬಿಯನ್ ಪ್ರೀಮಿಯರ್ ಲೀಗ್ಗಳಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ತಂಡಗಳು ಕಣಕ್ಕಿಳಿಯುತ್ತಿವೆ.
ಗಯಾನಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಸೂಪರ್ ಲೀಗ್ ಟೂರ್ನಿಯ 9ನೇ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್ ಅಕ್ಷರಶಃ ಅಬ್ಬರಿಸಿದ್ದಾರೆ. ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗಯಾನ ಅಮೆಝಾನ್ ವಾರಿಯರ್ಸ್ ಹಾಗೂ ಹೊಬಾರ್ಟ್ ಹರಿಕೇನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೊಬಾರ್ಟ್ ಹರಿಕೇನ್ಸ್ ತಂಡವು 16.1 ಓವರ್ಗಳಲ್ಲಿ 125 ರನ್ ಬಾರಿಸಿ ಆಲೌಟ್ ಆಯಿತು.
ಈ ಸುಲಭ ಗುರಿಯನ್ನು ಬೆನ್ನತ್ತಿದ ಗಯಾನ ಅಮೆಝಾನ್ ವಾರಿಯರ್ಸ್ 42 ರನ್ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಫ್ಯಾಬಿಯನ್ ಅಲೆನ್ ಎಸೆದ 10ನೇ ಓವರ್ನಲ್ಲಿ 5 ಭರ್ಜರಿ ಸಿಕ್ಸ್ಗಳೊಂದಿಗೆ ಹೆಟ್ಮೆಯರ್ 32 ರನ್ ಚಚ್ಚಿದರು. ಅಲ್ಲದೆ ಕೇವಲ 10 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ಗಳೊಂದಿಗೆ 39 ರನ್ ಬಾರಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು.
ಅಂತಿಮವಾಗಿ ಗಯಾನ ಅಮೆಝಾನ್ ವಾರಿಯರ್ಸ್ ತಂಡವು 16.3 ಓವರ್ಗಳಲ್ಲಿ 128 ರನ್ ಬಾರಿಸಿ 4 ವಿಕೆಟ್ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

