AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ

‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ

ಮಂಗಳ ರಾಜ್
| Edited By: |

Updated on: Nov 17, 2026 | 8:52 PM

Share

ಶೈನ್ ಶೆಟ್ಟಿ ನಟನೆಯ ‘ಶಂಕರಾಭರಣ’ ಸಿನಿಮಾ ನವೆಂಬರ್ 20ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಶೈನ್ ಶೆಟ್ಟಿ ಅವರು ಬಸ್ ಚಾಲಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಸ್ ಕೂಡ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದ ರೀತಿಯಲ್ಲಿ ಕಾಣಲಿದೆ. ಆ ಬಗ್ಗೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..

ಶೈನ್ ಶೆಟ್ಟಿ ನಟನೆಯ ‘ಶಂಕರಾಭರಣ’ ಸಿನಿಮಾ ನವೆಂಬರ್ 20ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಶೈನ್ ಶೆಟ್ಟಿ ಅವರು ಬಸ್ ಚಾಲಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಸ್ ಕೂಡ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದ ರೀತಿಯಲ್ಲಿ ಕಾಣಲಿದೆ. ‘ಇದು ತುಂಬಾ ಹಳೇ ಬಸ್. ಈ ಬಸ್ ಸಿಗುವುದು ನಮಗೆ ತುಂಬಾ ಕಷ್ಟ ಆಗಿತ್ತು. ಇರುವುದನ್ನು ಯಾರೂ ಕೂಡ ಕೊಡಲು ಸಿದ್ಧರಿರಲಿಲ್ಲ. ಮಂಜೇಶ್ವರ ಎಂಬ ಜಾಗದಲ್ಲಿ ನಮಗೆ ಇದು ಸಿಕ್ತು. ಇದು ನಮ್ಮ ಕೈಗೆ ಬಂದ ಬಳಿಕ ಚಮತ್ಕಾರ ಆಗಿದೆ. ನಮ್ಮ ಎಲ್ಲರ ಜೀವನದಲ್ಲಿ ಒಳ್ಳೆಯದು ಆಗಿದೆ. ಈ ಸಿನಿಮಾದ ಒಳಗೆ 18 ವರ್ಷಗಳ ತಪಸ್ಸು ಇದೆ. ನಾವು ನೋಡಿದ ಹಲವು ಬಸ್ ಚಾಲಕರ ಪಾತ್ರಗಳ ಸ್ಫೂರ್ತಿ ಈ ಕಥೆಯಲ್ಲಿ ಇದೆ’ ಎಂದು ಶೈನ್ ಶೆಟ್ಟಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More