ಶಿರಾಡಿ ಘಾಟ್ ಭೂಕುಸಿತ: ಸಕಲೇಶಪುರದಲ್ಲಿ ಸವಾರರಿಗೆ ನರಕ ದರ್ಶನ! ಅಸಲಿಗೆ ಆಗಿದ್ದೇನು ನೋಡಿ
ಹಾಸನ ಜಿಲ್ಲೆ ಸಕಲೇಶಪುರದ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಾತ್ರಿ ಶಿರಾಡಿ ಮಾರ್ಗವಾಗಿ ತೆರಳುತ್ತಿದ್ದ ನೂರಾರು ವಾಹನಗಳು ಅಲ್ಲಲ್ಲೇ ಬಾಕಿ ಆಗಿವೆ. ಬಸ್, ಕಾರುಗಳಲ್ಲಿದ್ದ ಪ್ರಯಾಣಿಕರು ಆಹಾರ, ನೀರು ಇಲ್ಲದೆ ಒದ್ದಾಡಿದ್ದಾರೆ. ವಿಡಿಯೋ ಇಲ್ಲಿದೆ.
ಹಾಸನ, ಜೂನ್ 26: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಪರಿಣಾಮವಾಗಿ ಸಕಲೇಶಪುರ ಬೈಪಾಸ್ ರಸ್ತೆ ಹಾಗೂ ಶಿರಾಡಿ ಘಾಟ್ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಲುಕಿವೆ. ಸಾಲು ಸಾಲು ನಿಂತಿರುವ ವಾಹನಗಳು ಮತ್ತು ಅಸಲಿಗೆ ಅಲ್ಲೇನಾಯ್ತು ಎಂಬುದರ ವಿಡಿಯೋ ವರದಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಭೂಕುಸಿತದಿಂದ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್: ಬೆಂಗಳೂರು – ಮಂಗಳೂರು ಸಂಚಾರಕ್ಕೆ ಬದಲಿ ಮಾರ್ಗ
Published on: Jun 26, 2025 09:18 AM
Latest Videos

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
