AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಹಾಸನ: ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ|

Updated on:Jul 18, 2024 | 10:22 AM

Share

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ. ಗುಡ್ಡ ಕುಸಿತದ ವಿಡಿಯೋ ಇಲ್ಲಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದ ವಿಡಿಯೋ ಇಲ್ಲಿದೆ.

ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸಿತ್ತು. ವಾಹನಗಳು ಸಂಚರಿಸುವಾಗ ಗುಡ್ಡದ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ನದಿಗಳು ಉಕ್ಕಿ ಹರಿಯುತ್ತಿರುವೆ.  ಕಾವೇರಿ, ಲಕ್ಷ್ಮಣತೀರ್ಥ ಮತ್ತು ಪಯಸ್ವಿನಿ ನದಿಗಳು ಉಕ್ಕಿ ಹರಿಯುತ್ತಿವೆ. ಮಡಿಕೇರಿ ತಾಲೂಕಿನ ಬೇಂಗೂರು, ದೋಣಿಕಡವು, ಹೊದವಾಡ ಸೇರಿ ಬೊಳಿಬಾಣೆಯಲ್ಲಿ ಕಾವೇರಿ ನದಿ, ಲಕ್ಷ್ಮಣ ತೀರ್ಥನದಿಯಿಂದ ಪ್ರವಾಹ ಉಂಟಾಗಿದೆ. ಇದರಿಂದ ನಾಪೋಕ್ಲು, ಮೂರ್ನಾಡು, ಚೆರಿಯಪರಂಬು ಗ್ರಾಮದ ಸಂಪರ್ಕ ಕಡಿತಗೊಂಡಿದೆ. ನೀರಿನಲ್ಲಿಯೇ ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶಿರೂರು ಬಳಿ ಗುಡ್ಡ ಕುಸಿತ: ಮಣ್ಣಿನಡಿ ಬೆಂಜ್ ​ಕಾರಿನ ಲೊಕೇಶನ್ ಪತ್ತೆ, ಮತ್ತಷ್ಟು ಹೆಚ್ಚಿಸಿದ ಆತಂಕ

Published on: Jul 18, 2024 08:14 AM