ಗದಗ: ಐಬಿ ರೂಮ್​ಗಾಗಿ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಮತ್ತು ಸುಜಾತಾ ದೊಡ್ಡಮನಿ ನಡುವೆ ವಾಗ್ವಾದ

Rakesh Nayak Manchi

Updated on: Jun 23, 2023 | 9:31 AM

ಮುಂಡರಗಿ ಪಟ್ಟಣದ ಪಿಡಬ್ಯ್ಲೂಡಿ ಇಲಾಖೆಗೆ ಸೇರಿದ ಐಬಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸುಜಾತಾ ದೊಡ್ಡಮನಿ, ತಮ್ಮ ಕಾರ್ಯಕರ್ತರ ಜೊತೆಗೆ ಸೇರಿದ್ದರು. ಈ ವೇಳೆ ಆಗಮಿಸಿದ ಶಾಸಕ ಡಾ.ಚಂದ್ರು ಲಮಾಣಿ ಮತ್ತು ಸುಜಾತ ನಡುವೆ ಐಬಿ ರೂಮ್ ವಿಚಾರದಲ್ಲಿ ವಾಗ್ವಾದ ನಡೆದಿದೆ.

ಗದಗ: ಐಬಿ ರೂಮ್​ಗಾಗಿ ಶಾಸಕ ಡಾ.ಚಂದ್ರು ಲಮಾಣಿ (Dr. Chandru Lamani) ಹಾಗೂ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಸುಜಾತಾ ದೊಡ್ಡಮನಿ (Sujatha Doddamani) ಮಧ್ಯೆ ಜಟಾಪಟಿ ನಡೆದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ. ಮುಂಡರಗಿ ಪಟ್ಟಣದ ಪಿಡಬ್ಯ್ಲೂಡಿ ಇಲಾಖೆಗೆ ಸೇರಿದ ಐಬಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸುಜತಾ ದೊಡ್ಡಮನಿ, ತಮ್ಮ ಕಾರ್ಯಕರ್ತರ ಜೊತೆಗೆ ಸೇರಿದ್ದರು. ಈ ವೇಳೆ ಆಗಮಿಸಿದ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಬಿಜೆಪಿ ಮುಖಂಡರು, ಇದು ನನಗೆ ಸೇರಿದ ರೂಮ್. ಇಲ್ಲಿಂದ ನೀವು ಹೊರಗೆ ಹೋಗಿ ಎಂದು ಹೇಳಿದ್ದಾರೆ. ಇದರಿಂದಾಗಿ ಕೆರಳಿದ ಸುಜತಾ ದೊಡ್ಡಮನಿ ಹಾಗೂ ಬೆಂಬಲಿಗರು ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಮಾತಿಗೆ ಮಾತು ಬೆಳೆದು ಒಂದು ಹಂತದಲ್ಲಿ ಸಹನೆ ಕಳೆದುಕೊಂಡ ಶಾಸಕ ಡಾ.ಚಂದ್ರು ಲಮಾಣಿ ನೀವು ವಸೂಲಿಗಾಗಿ ಬಂದಿದ್ದೀರಿ ಎಂದು ಜರಿದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಂಗ್ರೆಸ್ ನಾಯಕಿ ಸುಜತಾ ದೊಡ್ಡಮನಿ ಹಾಗೂ ಬೆಂಬಲಿಗರು ಶಾಸಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಜನನಾಯಕರ ಈ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jun 23, 2023 09:31 AM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.