ದೇವನಹಳ್ಳಿಯ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿಯ ಸಂಭ್ರಮ
ದೇವನಹಳ್ಳಿಯ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬದುಕು ಅರಸಿಕೊಂಡು ಬಂದಿರುವ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದ ಅನೇಕ ಜನ ವಾಸವಾಗಿದ್ದಾರೆ. ಉತ್ತರ ಭಾರತದಲ್ಲಿ ಶಿವನನ್ನು ಆರಾಧಿಸುವವರು ಅಪರಿಮಿತ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ, ದೇವಸ್ಥಾನಗಳಲ್ಲಿ ಉತ್ತರ ಭಾರತೀಯರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.
ದೇವನಹಳ್ಳಿ: ತಾಲ್ಲೂಕಿನ ವಿಜಯಪುರದಲ್ಲಿರುವ ಓಂಕಾರೇಶ್ವರ ದೇವಸ್ಥಾನ ರಾಜ್ಯದ ಪುರಾತನ ದೇವಾಲಯಗಳಲ್ಲಿ ಒಂದಾಗಿರುವುದರಿಂದ ಇತಿಹಾಸ ಪ್ರಸಿದ್ಧಿಯನ್ನು ಹೊಂದಿದೆ. ದೇಶದೆಲ್ಲೆಡೆ ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮ, ಸಡಗರ, ಭಕ್ತಿ ಮತ್ತು ನಿಷ್ಠೆಯಿಂದ ಆಚರಿಸಲಾಗುತ್ತಿದೆ. ದೇವನನಹಳ್ಳಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಭಕ್ತರ ದಂಡು. ಇಲ್ಲಿನ ಅರ್ಚಕರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ಹಲವಾರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಮಹಾಮಂಗಳಾರತಿಯ ನಂತರ ಭಕ್ತರು ದೇವರಿಗೆ ನಮಸ್ಕರಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Mahashivratri 2025: ಮುಟ್ಟಿನ ಸಮಯದಲ್ಲಿ ಮಹಾಶಿವರಾತ್ರಿ ಉಪವಾಸ ಮಾಡುವುದು ಹೇಗೆ? ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು