ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
Shiva Rajkumar: ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆಯಾದ ಇಂದು ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ್ ಕುಟುಂಬ ಆಗಮಿಸಿ ಪೂಜೆ ಮಾಡಿದ್ದರು. ಬೆಳಿಗ್ಗೆ ಕಾರ್ಯನಿಮಿತ್ತ ಬರಲಾಗದಿದ್ದ ಶಿವರಾಜ್ ಕುಮಾರ್ ಮತ್ತು ಕುಟುಂಬ ಸಂಜೆ ವೇಳೆಗೆ ಬಂದು ಪೂಜೆ ನೆರವೇರಿಸಿದರು.
ಪುನೀತ್ ರಾಜ್ಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು. ಪುನೀತ್ ಸಮಾಧಿಗೆ ಬೆಳಿಗಿನಿಂದಲೂ ಅಭಿಮಾನಿಗಳು ಭೇಟಿ ನೀಡಿ ಪೂಜೆ ಮಾಡಿ ಕೈಮುಗಿಯುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಬಂದು ಪೂಜೆ ಮಾಡಿದರು. ಶಿವರಾಜ್ ಕುಮಾರ್ ಹಾಗೂ ಕುಟುಂಬದವರು ಬೆಳಿಗ್ಗೆ ಆಗಮಿಸಿರಲಿಲ್ಲ. ಆದರೆ ಸಂಜೆ ವೇಳೆಗೆ ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಪುತ್ರಿ ಆಗಮಿಸಿ ಪೂಜೆ ಮಾಡಿದರು. ಸಂಜೆ ಶಿವಣ್ಣ ಬಂದಾಗಲೂ ಸಹ ಇನ್ನೂ ದೊಡ್ಡ ಸಂಖ್ಯೆಯ ಅಭಿಮಾನಿಗಳು ಸಮಾಧಿ ಬಳಿ ಆಗಮಿಸುತ್ತಲೇ ಇದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ