ವಿಡಿಯೋ: ಚುನಾವಣಾ ಪ್ರಚಾರದಲ್ಲಿ ಭರ್ಜರಿ ಡೈಲಾಗ್ ಹೊಡೆದ ಶಿವರಾಜ್ ಕುಮಾರ್

Updated on: Mar 28, 2024 | 10:02 AM

Shiva Rajkumar: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವಣ್ಣ ಭರ್ಜರಿ ಪ್ರಚಾರ ಮಾಡುತ್ತಿದ್ದು, ಶಿವಮೊಗ್ಗದ ಹಾರೋಹಳ್ಳಿಯಲ್ಲಿ ಜನರ ಬೇಡಿಕೆ ಮೇರೆಗೆ ಹಾಡು, ಸಿನಿಮಾ ಡೈಲಾಗ್​ಗಳನ್ನು ಹೊಡೆದಿದ್ದಾರೆ.

ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಶಿವಮೊಗ್ಗದ ಹಳ್ಳಿ-ಹಳ್ಳಿಗೆ ಹೋಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದ ಪ್ರಚಾರದಲ್ಲಿ ಶಿವಣ್ಣನೇ ಹೈಲೈಟ್ ಆಗಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಹಾರೋಹಳ್ಳಿಗೆ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಶಿವರಾಜ್ ಕುಮಾರ್ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಅಂತಿಮವಾಗಿ ಊರ ಜನರ ಬೇಡಿಕೆ ಮೇರೆಗೆ ‘ನಾನೆಂದೂ ನಿಮ್ಮವನು’ ಹಾಡು ಹಾಡುವ ಜೊತೆಗೆ ತಮ್ಮ ಸಿನಿಮಾದ ಕೆಲವು ಖಡಕ್ ಡೈಲಾಗ್​ಗಳನ್ನು ಸಹ ಹೊಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More