ದುನಿಯಾ ವಿಜಯ್ ನಿರ್ದೇಶನದಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ ಶಿವಣ್ಣ
Shiva Rajkumar: ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ನಟ ಶಿವರಾಜ್ ಕುಮಾರ್, ದುನಿಯಾ ವಿಜಯ್ ನಿರ್ದೇಶನದಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 03) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಶಿವರಾಜ್ ಕುಮಾರ್ ದಂಪತಿಗಳಿಗೆ ಹೂವಿನ ಮಳೆಯನ್ನು ಸುರಿಸಿ ಸ್ವಾಗತ ಕೋರಿದರು ದುನಿಯಾ ವಿಜಯ್. ಟ್ರೈಲರ್ ಬಿಡುಗಡೆ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, ನಮ್ಮ ಬೆಂಬಲ, ಜನರ ಬೆಂಬಲ ಅವರಿಗೆ ಇದೆ, ಎಲ್ಲರಿಗೂ ಒಳ್ಳೆಯದಾಗಲಿ, ನಾನು ವಿಜಯ್ ನಿರ್ದೇಶನದಲ್ಲಿ ನಟಿಸುವಂತೆ ಆಗಲಿ. ನನಗೆ ಆಕ್ಷನ್ ಸಿನಿಮಾಗಳೆಂದರೆ ಬಹಳ ಇಷ್ಟ, ನೋಡೋಣ, ಒಂದು ದಿನ ಸಾಧ್ಯವಾದರೆ ಒಟ್ಟಿಗೆ ಕೆಲಸ ಮಾಡುತ್ತೇವೆ’ ಎಂದರು ಶಿವಣ್ಣ. ದುನಿಯಾ ವಿಜಯ್ ಸಹ ಖಂಡಿತ ಎಂದು ಹೇಳಿ ಒಮ್ಮತ ವ್ಯಕ್ತಪಡಿಸಿದರು. ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ