ಪತ್ನಿ ಗೀತಾ ಪರ ಚುನಾವಣಾ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್
Shiva Rajkumar: ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಟ ಶಿವರಾಜ್ ಕುಮಾರ್ ಸಹ ಪತ್ನಿಯೊಟ್ಟಿಗೆ ಚುನಾವಣಾ ಪ್ರಚಾರ ಕಣಕ್ಕೆ ಇಳಿದಿದ್ದಾರೆ.
ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ, ಡಾ ರಾಜ್ಕುಮಾರ್ ಸೊಸೆ, ಶಿವರಾಜ್ ಕುಮಾರ್ (Shiva Rajkumar) ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ಇಂದಿನಿಂದಲೇ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪತ್ನಿ ಗೀತಾಗೆ ನೆರಳಾಗಿ ಶಿವರಾಜ್ ಕುಮಾರ್ ಸಹ ಬಂದಿದ್ದಾರೆ. ಇಬ್ಬರೂ ಒಟ್ಟಿಗೆ ಬಿಸಿನಲ್ಲಿಯೇ ಶಿವಮೊಗ್ಗದ ಹಲವು ಬೀದಿಗಳನ್ನು ಸುತ್ತಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ವೇಳೆ ಅದ್ಧೂರಿಯಾಗಿ ಬೈಕ್ ರ್ಯಾಲಿ ಸಹ ನಡೆದಿದೆ. ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿರೆಂದು ಶಿವಮೊಗ್ಗದ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

