ವಿಷ್ಣು ಸ್ಮಾರಕ ವಿವಾದ: ಶಿವರಾಜ್ ಕುಮಾರ್ ಹೇಳಿದ್ದು ಹೀಗೆ…
Shiva Rajkumar: ವಿಷ್ಣುವರ್ಧನ್ ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋನಲ್ಲಿ ಮಾಡಬೇಕೆಂದು ಅವರ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಶಿವರಾಜ್ ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಷ್ಣುವರ್ಧನ್ (Vishnuvardhan) ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋನಲ್ಲಿ ಮಾಡಬೇಕೆಂದು ಅವರ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಇದೇ ವಿಷಯವಾಗಿ ಫಿಲಂಚೇಂಬರ್ ಬಳಿ ಪ್ರತಿಭಟನೆ ಸಹ ಮಾಡಿದ್ದಾರೆ. ಅಭಿಮಾನಿಗಳ ಕೂಗಿಗೆ ಕಿಚ್ಚ ಸುದೀಪ್, ಡಾಲಿ ಧನಂಜಯ್ ಸೇರಿದಂತೆ ಇನ್ನೂ ಕೆಲವರು ಬೆಂಬಲ ನೀಡಿದ್ದಾರೆ. ಇಂದು (ಡಿಸೆಂಬರ್ 21) ಸಿಎಂ ಸಿದ್ದರಾಮಯ್ಯ ಅವರನ್ನು ಬೇರೆ ಕಾರಣಗಳಿಗಾಗಿ ಭೇಟಿ ಆಗಿದ್ದ ಶಿವರಾಜ್ ಕುಮಾರ್, ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುತ್ತಾ, ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ